Gl harusha
ಕರಾವಳಿಸ್ಥಳೀಯ

ಬುರ್ಖಾ ಧರಿಸಿ ಮಹಿಳೆಗೆ ಆ್ಯಸಿಡ್‌ ಎರಚಿ, ಚಿನ್ನಾಭರಣ ಸುಲಿಗೆ: ಮೂವರ ಬಂಧನ

ಫೈನಾನ್ಸ್‌ ಸೊಸೈಟಿಯೊಂದರಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್‌ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಫೈನಾನ್ಸ್‌ ಸೊಸೈಟಿಯೊಂದರಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್‌ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

srk ladders
Pashupathi
Muliya

ಬಜಪೆ ಶಾಂತಿಗುಡ್ಡೆಯ ಪ್ರೀತೇಶ್‌ ಯಾನೆ ಪ್ರೀತು (31), ಸುರತ್ಕಲ್‌ ಕೋಡಿಕರೆಯ ಧನರಾಜ್‌ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.

ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಬಜಪೆ ಫೈನಾನ್ಸ್‌ಗೆ ಜು. 4.ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಪ್ರೀತೇಶ್‌ ವಿರುದ್ಧ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್‌ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್‌ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ 2 ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಒಂದು ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್‌ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ