ಸ್ಥಳೀಯ

ನೀಟ್ ಮರುಪರೀಕ್ಷೆಗೆ ಆಗ್ರಹಿಸಿ ಪ್ರತಿಭಟನೆ

GL
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪುತ್ತೂರು ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ & ಮರುಪರೀಕ್ಷೆಗೆ ಆಗ್ರಹಿಸಿ NSUI ಅಧ್ಯಕ್ಷರಾದ ಎಡ್ವರ್ಡ್ ಪುತ್ತೂರು ರವರ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪುತ್ತೂರು ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ & ಮರುಪರೀಕ್ಷೆಗೆ ಆಗ್ರಹಿಸಿ NSUI ಅಧ್ಯಕ್ಷರಾದ ಎಡ್ವರ್ಡ್ ಪುತ್ತೂರು ರವರ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

chennai-shopping
maithri

NSUI ಮಾಜಿ ಅಧ್ಯಕ್ಷರಾದ ಕಾವು ಹೇಮಾನಾಥ ಶೆಟ್ಟಿ ಮಾತನಾಡಿ, ನೀಟ್ ಅಕ್ರಮವು ಬಹಳ ಗಂಭೀರ ವಿಷಯವಾಗಿದ್ದು, ಕೇಂದ್ರ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸುತ್ತಿದೆ. ಇದು ಖಂಡನೀಯ, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಂದು ದೇಶದ್ಯಾಂತ ಹೋರಾಟ ನಡೆಸುತ್ತಿದ್ದು ಖಂಡಿತವಾಗಿಯೂ ಈ ಹೋರಾಟಕ್ಕೆ ಜಯ ಸಿಗಲಿದೆ ಎಂದರು.

ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಮಾತನಾಡಿ, “NSUI ವಿದ್ಯಾರ್ಥಿ ಸಂಘಟನೆಯು ನೀಟ್ ಪರೀಕ್ಷೆಯಲ್ಲಿನ ಅಕ್ರಮದ ಬಗ್ಗೆ ದೇಶದಲ್ಲಿ ಸೇರಿದಂತೆ ಪುತ್ತೂರಿನಲ್ಲಿಯೂ ಪ್ರತಿಭಟನೆ ಮುಖಾಂತರ ವಿದ್ಯಾರ್ಥಿಗಳ ಪರ ಹೋರಾಡುತ್ತಿರುವುದು ಒಳ್ಳೆಯ ವಿಚಾರ. ಕೇಂದ್ರ ಸರ್ಕಾರವು ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ” ಎಂದರು.

NSUI ಅಧ್ಯಕ್ಷ ಎಡ್ವರ್ಡ್ ಮಾತನಾಡಿ, “ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ ನಾವು ಸದಾ ಅವರ ಪರ ಇದ್ದೇವೆ. ನೀಟ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನ್ಯಾಯ ದೊರಕುವವರೆಗೂ ನಾವು ಹೋರಾಟ ಮುಂದುವರೆಸುತ್ತೇವೆ” ಎಂದರು.

ರಾಜ್ಯ NSUI ಉಪಾಧ್ಯಕ್ಷ ಫಾರೂಕ್ ಬಾಯಬೆ, “ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದ್ದಾರೆ. ನೀಟ್ ಮರು ಪರೀಕ್ಷೆ ನಡೆಸಲೇಬೇಕು” ಎಂದು ಒತ್ತಾಯಿಸಿದರು.

ರಾಜ್ಯ NSUI ಕಾರ್ಯದರ್ಶಿ ಭಾತೀಷ್ ಅಳಕೆಮಜಲು, “ಇಂದು ಕೇಂದ್ರ ಸರ್ಕಾರವು ನೀಟ್ ಪರೀಕ್ಷೆಯ ಮೌಲ್ಯವನ್ನು ಕಳೆಯುವಂತೆ ಮಾಡಿದೆ. ನೀಟ್ ಬರೆದು ತಮ್ಮ ವೈದ್ಯಕೀಯ ಭವಿಷ್ಯಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

NSUI ಪ್ರಮುಖ ಭವಿಷ್ ಸುವರ್ಣ ಮಾತನಾಡಿ, “ನೀಟ್ ಹಗರಣವು ಇಲ್ಲಿವರೆಗಿನ ಅತೀ ದೊಡ್ಡ ಶೈಕ್ಷಣಿಕ ಹಗರಣವಾಗಿದೆ. ನಾವು ನ್ಯಾಯ ದೊರಕುವ ವರೆಗೂ ಹಿಂಜರಿಯುವುದಿಲ್ಲ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ನಾಯಕರಾದ ಸಂತೋಷ್ ಭಂಡಾರಿ, ರಾಜ್ಯ NSUI ಕಾರ್ಯದರ್ಶಿ ಭಾತೀಷ್ ಅಳಕೆಮಜಲು, NSUI ಪ್ರಮುಖ ಭವಿಷ್ ಸುವರ್ಣ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಯೋಜನಕ ಸುಹೈಲ್, ಜಿಲ್ಲಾ ನಾಯಕ ಆಸ್ಟನ್ ಫೆರ್ನಾಂಡಿಸ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123