ಸ್ಯಾಂಡಲ್ವುಡ್ ನಟನ ವಿರುದ್ಧ ಎಫ್.ಐ.ಆರ್ FIR! ಕಿರಿಕ್ ಪಾರ್ಟಿ Kirik party ಖ್ಯಾತಿಯ ರಕ್ಷಿತ್ ಶೆಟ್ಟಿಯದ್ದೇನು ಹೊಸ ಕಿರಿಕ್?
G L Acharya Jewellers
ರಾಜ್ಯ ವಾರ್ತೆಸ್ಥಳೀಯ

ಸ್ಯಾಂಡಲ್ವುಡ್ ನಟನ ವಿರುದ್ಧ ಎಫ್.ಐ.ಆರ್ FIR! ಕಿರಿಕ್ ಪಾರ್ಟಿ Kirik party ಖ್ಯಾತಿಯ ರಕ್ಷಿತ್ ಶೆಟ್ಟಿಯದ್ದೇನು ಹೊಸ ಕಿರಿಕ್?

Karpady sri subhramanya
ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Karpady jathre

ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

SRK Ladders

ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ.

ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್ಟಿ ಮ್ಯೂಸಿಕ್ನ ಪಾಲುದಾರಿಕೆ ಹೊಂದಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.

ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Kerala Astrologer

Related Posts

ನೆಲ ಜಲ ಸಂರಕ್ಷಣೆ ಉಪನ್ಯಾಸ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ ಆಯೋಜನೆ

ನೆಲ ಜಲ ಸಂರಕ್ಷಣೆ ಉಪನ್ಯಾಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ…