ಸ್ಥಳೀಯ

ಸದಾನಂದ ಸುವರ್ಣ ನಿಧನ !

ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ಅವರು ಇಂದು(ಮಂಗಳವಾರ) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ಅವರು ಇಂದು(ಮಂಗಳವಾರ) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮೂಲ್ಕಿ ಮೂಲದ ಅವರು ಹಲವು ವರ್ಷಗಳ ಕಾಲ ಮುಂಬಯಿನಲ್ಲಿ ವಾಸವಾಗಿದ್ದರು. ಕನ್ನಡ ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸುವರ್ಣರು ಧರ್ಮಚಕ್ರ, ಸುಳಿ, ಡೊಂಕುಬಾಲದ ನಾಯಕರು, ಕೋರ್ಟ್‌ ಮಾರ್ಷಲ್‌, ಉರುಳು ಮತ್ತಿತರ ಜನಪ್ರಿಯ ನಾಟಕ ರಚನೆಮಾಡಿದ ಹೆಗ್ಗಳಿಕೆ ಇವರದ್ದು.

ಅಲ್ಲದೆ ಅವರ ಗುಡ್ಡೆದ ಭೂತ ಧಾರವಾಹಿ ದೂರದರ್ಶನದಲ್ಲಿ ಬಹಳ ಜನಮೆಚ್ಚುಗೆ ಗಳಿಸಿತ್ತು, ಅವರ ಘಟಶ್ರಾದ್ಧ ಸಿನಿಮಾಕ್ಕೆ ಸ್ವರ್ಣಕಮಲ ಪ್ರಶಸ್ತಿ ಸಿಕ್ಕಿರುತ್ತದೆ. ಮಂಗಳೂರಿನ ಹವ್ಯಾಸಿ ರಂಗಭೂಮಿಗೆ ಹೊಸ ಸ್ಪರ್ಶ ನೀಡಿದವರು ಸದಾನಂದ ಸುವರ್ಣರು.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2