Gl
ಸ್ಥಳೀಯ

Shiradi Ghat: ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

rachana_rai
Pashupathi
akshaya college

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಹಿಂತಿರುಗಿ ಬರುವ ಸಂದರ್ಭ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.

pashupathi

ಈ ಸಂದರ್ಭದಲ್ಲಿ ಅಲ್ಲೇ ಇದ್ದ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕ ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.

ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100