ಕರಾವಳಿಸ್ಥಳೀಯ

ಕೋಳಿ ಅಂಕಕ್ಕೆ ಪೆಂಡಾಲ್ ಹಾಕುತ್ತಿದ್ದಾಗ ವಿದ್ಯುತ್ ಅವಘಡ! ಓರ್ವ ಮೃತ್ಯು, ನಾಲ್ವರಿಗೆ ಗಾಯ

ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

akshaya college

ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದು, ಕಡೇಶ್ವಾಲ್ಯ ಗ್ರಾಮದ ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕ ನಡೆಸುವ ಉದ್ದೇಶದಿಂದ ಪೆಂಡಾಲ್ ಹಾಕುತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಗ್ರಾಮ ಕರಣಿಕ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 132