ಸ್ಥಳೀಯ

ಸರ್ವೆ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಪತ್ತೆ

ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.

ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ, ಪುತ್ತೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸನ್ಮಿತ್ (21) ಮೃತ ಯುವಕ.

SRK Ladders

ಸನ್ಮಿತ್ ಜು.19 ರಂದು ರಾತ್ರಿ ವೇಳೆ ಕೆಲಸ ಮುಗಿಸಿ ಬರುವಾಗ ಸರ್ವೆ ಗೌರಿ ಹೊಳೆಯ ಪಕ್ಕ ವಾಹನ ನಿಲ್ಲಿಸಿ, ಮೊಬೈಲ್, ಪರ್ಸ್ ಗಳನ್ನು ಅಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದು, ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು.

ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿದ ವೇಳೆ ಇಂದು ಯುವಕನ ಮೃತದೇಹ ಪತ್ತೆಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3