ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಟ್ಯಾಂಕರ್ ಮತ್ತು ತ್ರಿವೀಲರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ವಿಶೇಷ ಚೇತನರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಜು. 23ರಂದು ರಾತ್ರಿ ಸಂಭವಿಸಿದೆ.
ಮೃತಪಟ್ಟವರನ್ನು ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50 ವ) ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲರ್ ಸ್ಕೂಟರ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.


























