ರಾಜ್ಯ ವಾರ್ತೆಸ್ಥಳೀಯ

ಗಂಗಾವಳಿ ನದಿಯಲ್ಲಿ ಮುಳುಗಿದ್ದ ಟ್ರಕ್ ಪತ್ತೆ ! ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರಿಕೆ!

GL
ಗಂಗಾವಳಿ ನದಿಯಲ್ಲಿ ಪತ್ತೆಯಾದ ಲಾರಿ ಕೇರಳದ ಕೋಝಿಕ್ಕೋಡ್ ಮೂಲದ  ಅರ್ಜುನ್ ಎಂಬುವರಿಗೆ ಸೇರಿದ್ದು ಎಂದು  ಪೊಲೀಸರು ಬುಧವಾರ (ಜು.24ರಂದು) ಖಚಿತಪಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗಂಗಾವಳಿ ನದಿಯಲ್ಲಿ ಪತ್ತೆಯಾದ ಲಾರಿ ಕೇರಳದ ಕೋಝಿಕ್ಕೋಡ್ ಮೂಲದ ಅರ್ಜುನ್ ಎಂಬುವರಿಗೆ ಸೇರಿದ್ದು ಎಂದು ಪೊಲೀಸರು ಬುಧವಾರ (ಜು.24ರಂದು) ಖಚಿತಪಡಿಸಿದ್ದಾರೆ.
ಜುಲೈ 16 ರಂದು ಕರ್ನಾಟಕದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಇಬ್ಬರೊಂದಿಗೆ ನಾಪತ್ತೆಯಾಗಿದ್ದ ಅರ್ಜುನ್ ಹುಡುಕಾಟದ ಕಾರ್ಯಾಚರಣೆ ಬುಧವಾರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ.

chennai-shopping
maithri

ಲಾರಿ ಇರುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಟ್ವೀಟ್:

ಒಂದು ಟ್ರಕ್ ಅನ್ನು ನೀರಿನಲ್ಲಿ ಖಚಿತವಾಗಿ ಪತ್ತೆ ಹಚ್ಚಲಾಗಿದೆ. ನೌಕಾಪಡೆಯ ಸ್ವಿಮ್ಮರ್ಸ , ಮುಳುಗು ತಜ್ಞರು ಶೀಘ್ರದಲ್ಲೇ ನದಿಯಲ್ಲಿ ಲಂಗರು ಹಾಕಲು ಪ್ರಯತ್ನಿಸುತ್ತಿದ್ದಾರೆ‌ . ನದಿಯ ಹೂಳೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುತ್ತಿದೆ. ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಅಂಡರ್ ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಸಹ ಶೋಧಕ್ಕಾಗಿ ನಿಯೋಜಿಸಲಾಗಿದೆ. ಕೋಸ್ಟ್ ಗಾರ್ಡ್ ನೀರಿನಲ್ಲಿ ನಾಪತ್ತೆಯಾದ ಮೃತದೇಹಗಳಿಗಾಗಿ ಹೆಲಿಕಾಪ್ಟರ್ ಹುಡುಕಾಟ ನಡೆಸಲಿದೆ ಎಂದು ಕರ್ನಾಟಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಾಮಾಜಿಕ ಮಾಧ್ಯಮ ʼXʼ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 153