ರಾಜ್ಯ ವಾರ್ತೆಸ್ಥಳೀಯ

ಮಂಗಳೂರು – ಬೆಂಗಳೂರು ಪ್ರಮುಖ ಕೊಂಡಿ ಶಿರಾಡಿ ಘಾಟ್’ನಲ್ಲಿ ಗುಡ್ಡ ಕುಸಿತ!! ಸರತಿ ಸಾಲಿನಲ್ಲಿ ಕಾದು ಕುಳಿತ ವಾಹನ ಸವಾರರು, ಪ್ರಯಾಣಿಕರು!!

ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತಗೊಂಡಿದೆ. ಪರಿಣಾಮ ಮಂಗಳೂರು - ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್ ಸಂಪರ್ಕ ಕಡಿತಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತಗೊಂಡಿದೆ. ಪರಿಣಾಮ ಮಂಗಳೂರು – ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್’ನಲ್ಲಿ ಗುಡ್ಡ ಕುಸಿತಗೊಂಡಿದ್ದ ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಶುಕ್ರವಾರವಷ್ಟೇ ಶಿರಾಡಿ ಘಾಟ್ ನಲ್ಲಿ ರೈಲು ಸಂಪರ್ಕ ಕಡಿತಗೊಂಡಿತ್ತು. ಶನಿವಾರ ರಸ್ತೆಯ ಸರದಿ.

SRK Ladders

ದೋಣಿಗಲ್ ಬಳಿ ಗುಡ್ಡವೊಂದು ಕುಸಿಯುತ್ತಿದ್ದು, ರಸ್ತೆಯನ್ನು ಸಂಪೂರ್ಣ ಆವರಿಸಿಕೊಂಡಿತ್ತು. ಕುಸಿದ ಮಣ್ಣನ್ನು ಸರಿಸುವಲ್ಲಿ ಜೆಸಿಬಿ ಮೂಲಕ ಕಾರ್ಯ ನಿರ್ವಹಿಸಿ, ವಾಹನ ಸಾಗಾಟಕ್ಕೆ ಅನುವು ಮಾಡಿಕೊಡಲಾಯಿತು.

ಸಂಚಾರಕ್ಕೆ ಸಂಪೂರ್ಣ ತೊಡಕ್ಕಾಗಿದ್ದು ಮಂಗಳೂರು ಕಡೆಯಿಂದ ಹೋಗಿರುವ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು, ಮಣ್ಣು ತೆರವಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂತು. ಬೆಂಗಳೂರು, ಹಾಸನ ಕಡೆಯಿಂದ ಬರುತ್ತಿರುವ ವಾಹನಗಳನ್ನು ಪರ್ಯಾಯ ರಸ್ತೆಯಲ್ಲಿ ಕಳುಹಿಸಿಕೊಡಲಾಯಿತು.

ಗುಡ್ಡದ ಮಣ್ಣು ಮತ್ತಷ್ಟು ರಸ್ತೆಗೆ ಸುರಿಯುವ ಅಪಾಯ ಇದೆ. ಇದೇ ರೀತಿ ಮುಂದುವರಿದರೆ ರಸ್ತೆ ಸಂಪೂರ್ಣ ಮುಚ್ಚಿ ಹೋಗುವ ಭೀತಿ ಎದುರಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4