ಕರಾವಳಿಸ್ಥಳೀಯ

ಮೂಡುಬಿದಿರೆ: ಗೀಸರ್ ನಿಂದ ವಿಷಾನಿಲ ಸೋರಿಕೆ – ಉಸಿರುಗಟ್ಟಿ ಮೃತ್ಯು!!

ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮೂಡುಬಿದಿರೆ: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.

ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ.

SRK Ladders

ಶಾರಿಕ್ ರವಿವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆ ಆಗಿದೆ. ಇದನ್ನು ಆಕಸ್ಮಿಕವಾಗಿ ಸೇವಿಸಿದ್ದರಿಂದ ಶಾರಿಕ್ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಶಾರಿಕ್ ದ್ವಿತೀಯ ಪಿಯುಸಿ ಮುಗಿಸಿದ್ದು, ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 4