ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.
ಮೃತಪಟ್ಟ ಸವಾರ ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ. ನಂತೂರು ಪದವು ರಸ್ತೆಯಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವು ಸವಾರನ ನಿಯಂತ್ರಣ ತಪ್ಪಿ ಉರುಳಿದ್ದು, ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎನ್ನಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.
ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.