ಕರಾವಳಿಸ್ಥಳೀಯ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ | ಸಂತೋಷ್ ಪಿ ಕೋಟ್ಯಾನ್ ಬಳಂಜ ಅವರಿಗೆ ಪ್ರತಿಷ್ಠಿತ ಸಾಧನಾ ಶ್ರೀ ಪುರಸ್ಕಾರ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರಿಗೆ ಜುಲೈ 28 ರಂದು ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.

core technologies

akshaya college

2011ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡ ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೆಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2017ರಲ್ಲಿ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.

ವೃತ್ತಿ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ, ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ ‘ವೈಭವ’ ಸಾಧಕ ಜೇಸಿಗಳ ಸಮಾಗಮದಲ್ಲಿ ಸಾಧನಾಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 148