ಧಾರ್ಮಿಕಸ್ಥಳೀಯ

ಆ. 16ಕ್ಕೆ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ 17ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ | ಪೂಜಾ ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆ: ಶಕುಂತಳಾ ಟಿ ಶೆಟ್ಟಿ

GL
ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗೂ ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ. 16ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ ಎಂದು ಸಮರ್ಪಣಾ ಮಹಿಳಾ ಸೇವಾ ಸಮಿತಿ ಗೌರವಾಧ್ಯಕ್ಷೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗೂ ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ. 16ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ ಎಂದು ಸಮರ್ಪಣಾ ಮಹಿಳಾ ಸೇವಾ ಸಮಿತಿ ಗೌರವಾಧ್ಯಕ್ಷೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

chennai-shopping
maithri

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ವೇ ಮೂ ಹರಿಪ್ರಸಾದ್ ವೈಲಾಯ ಅವರ ಪೌರೋಹಿತ್ಯದಲ್ಲಿ ಪೂಜೆ ನಡೆಯಲಿದೆ. ಮಧ್ಯಾಹ್ನ 11 ಗಂಟೆಗೆ ನಡೆಯಲಿರುವ ಧಾರ್ಮಿಕ ಸಭೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್‌ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ. ಶೆಟ್ಟಿ, ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್. ರೈ ಕುತ್ಯಾಡಿ ಮುಖ್ಯ ಅತಿಥಿಗಳಾಗಿರುವರು.

ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ, ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದವರು ಹೇಳಿದರು.

ಪೂಜಾ ಸೇವೆ ಮಾಡಿಸಿದವರಿಗೆ ಹಿಂದೆ ರವಿಕೆ ಕಣವನ್ನು ಪ್ರಸಾದ ರೂಪದಲ್ಲಿ ನೀಡಲಾಗುತ್ತಿತ್ತು. 5ನೇ ವರ್ಷಕ್ಕೆ ಸೀರೆ ವಿತರಣೆ ಮಾಡಿದ್ದೇವು. ಅದಾದ ಬಳಿಕ ಮತ್ತೆ ರವಿಕೆ ಕಣ ವಿತರಣೆ ಮಾಡಲಾಗುತ್ತಿತ್ತು. ಇದೀಗ 17ನೇ ವರ್ಷದ ಪೂಜಾ ಕಾರ್ಯಕ್ರಮದಲ್ಲಿ ಸೀರೆ ವಿತರಣೆ ಮಾಡುತ್ತಿದ್ದೇವೆ ಎಂದು ಶಕುಂತಳಾ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 146