pashupathi
ಕರಾವಳಿಸ್ಥಳೀಯ

ಮನೆ ಕುಸಿತ: ಜನತಾ ಕಾಲನಿಯ ಮಹಿಳೆ ಮೃತ್ಯು!

tv clinic
ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

akshaya college

ಗೋಪಿ (68) ಮೃತಪಟ್ಟ ಮಹಿಳೆ.

ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗೋಪಿ ಅವರ ಮನೆ ಕುಸಿದು ಬಿದ್ದಿದ್ದು ಈ ಸಂದರ್ಭದಲ್ಲಿ ಗೋಪಿ ಅವರು ಗಾಯಗೊಂಡಿದ್ದರು. ಮನೆಯಲ್ಲಿದ್ದ ಅವರ ಮಕ್ಕಳೆಲ್ಲಾ ಅಪಾಯದಿಂದ ಗಾಯಗೊಂಡಿದ್ದ ಗೋಪಿ ಅವರನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಮಾಜಿ ಅಧ್ಯಕ್ಷ ಜಯಂತ ಹೆಗ್ಡೆ ಸಹಿತ ಕೆಲವರು ಹೊಸ್ಮಾರಿನ ಕ್ಲಿನಿಕ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗೋಪಿ ಅವರು ಐದು ಮಂದಿ ಗಂಡು ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…

1 of 145