ರಾಜ್ಯ ವಾರ್ತೆಸ್ಥಳೀಯ

ಬೆಂಗಳೂರು ಕಾರ್ಯಕ್ರಮ ರದ್ದುಪಡಿಸಿ, ಪುತ್ತೂರಿನ ವಿವಿಧೆಡೆಗೆ ಭೇಟಿ ನೀಡಲಿರುವ ಶಾಸಕರು! ಸಿಎಂ ಸಿದ್ದರಾಮಯ್ಯ ಪುತ್ತೂರು ಬೇಟಿ?

ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿ‌ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು ಪುತ್ತೂರಿನಲ್ಲಿ ವಿವಿಧ ಕಡೆಗಳಿಗೆ ಭೇಟಿ ನೀಡಲಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿ‌ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು ಪುತ್ತೂರಿನಲ್ಲಿ ವಿವಿಧ ಕಡೆಗಳಿಗೆ ಭೇಟಿ ನೀಡಲಿದ್ದಾರೆ.

ಇಂದು ಬೆಂಗಳೂರಿನಲ್ಲಿ ವಿವಿಧ ಸಚಿವರ ಭೇಟಿ ಹಾಗೂ ಕಂಬಳ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿ, ಇಂದು ಪುತ್ತೂರಿಗೆ ಬರಲಿದ್ದು ಮಳೆಯ ಕಾರಣಕ್ಕೆ ಅನೇಕ ಕಡೆಗಳಲ್ಲಿ ಧರೆ ಕುಸಿತ, ಮನೆಗಳಿಗೆ ಹಾಗೂ ಕೃಷಿಗಳಿಗೆ ಹಾನಿಯಾಗಿದ್ದು ಹಿಂದೆಂದೂ ಕಂಡರಿಯದ ರೀತಿಯಲ್ಲಿ‌ಮಳೆಗೆ ಅನಾಹುತಗಳು ಸಂಭವಿಸಿದೆ. ದಿನದ 24 ಗಂಟೆ ಅಲರ್ಟ್ ಆಗಿರುವಂತೆ ಶಾಸಕರು ಎರಡು ದಿನಗಳ ಹಿಂದೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದರು. ಪೃಕೃತ್ತಿ ವಿಕೋಪದಿಂದ ಯಾವುದೇ ಜೀವ ಹಾನಿ ಸಂಭವಿಸದೇ ಇದ್ದರೂ ಲಕ್ಷಾಂತರ ರೂ ನಷ್ಟ ಉಂಟಾಗಿದೆ. ಇಂದು ಶಾಸಕರು ಕೆಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

SRK Ladders

10 ಕೋಟಿ ರೂ ಪರಿಹಾರಕ್ಕೆ ಸಿ ಎಂ ಮನವಿ
ಮಳೆಯಿಂದ ತತ್ತರಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ ಪರಿಹಾರವನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ. ಮನೆ ಕುಸಿತ, ಧರೆ ಕುಸಿತದಿಂದ ಮನೆ ಹಾನಿಗೊಳಗಾದವರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ‌ ಮಾಡಿದರು.

ಮುಂದಿನ ವಾರ ಸಿಎಂ ಪುತ್ತೂರು ಭೇಟಿ
ಪೃಕೃತ್ತಿ ವಿಕೋಪದಿಂದ ಆಗಿರುವ ಅನಾಹುತವನ್ನು ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ. 6 ಅಥವಾ 7 ರಂದು ಭೇಟಿ ನೀಡಲಿದ್ದಾರೆ. ಪುತ್ತೂರಿಗೆ ಭೇಟಿ ನೀಡುವಂತೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದು ಇದಕ್ಕೆ ಸಿ ಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4