ಬರೇಲಿ: ಅನ್ಯಕೋಮಿಗೆ ಸೇರಿದ ನೆರೆಮನೆಯ ಯುವತಿಯೊಂದಿಗೆ ಓಡಿಹೋಗಿದ್ದ 21 ವರ್ಷದ ಯುವಕನ ಮನೆಯನ್ನು ಉದ್ರಿಕ್ತ ಗ್ರಾಮಸ್ಥರು ಬೆಂಕಿ ಹಚ್ಚಿ ಭಸ್ಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿದಾಗ ಅವರ ವಾಹನವನ್ನು ಕೂಡಾ ಉದ್ರಿಕ್ತರು ಜಖಂಗೊಳಿಸಿದ್ದಾರೆ.
ಹೇಗೋ ತಪ್ಪಿಸಿಕೊಂಡ ಪೊಲೀಸರು ತಮ್ಮ ಮೇಲಧಿಕಾರಿಗಳಿಗೆ ವಿಷಯವನ್ನು ವಿವರಿಸಿದ್ದಾರೆ. ಅಕ್ಕಪಕ್ಕದ ಠಾಣೆಗಳಿಂದ ಹೆಚ್ಚಿನ ಪೊಲೀಸರನ್ನು ಗ್ರಾಮಕ್ಕೆ ಕಳುಹಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.