Gl harusha
ಕರಾವಳಿಸ್ಥಳೀಯ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.

srk ladders
Pashupathi
Muliya

ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ.

ಸೋಮವಾರ ಬೆಳಗಿನ ಜಾವ 3ರಿಂದ 4 ಗಂಟೆಯ ಅವಧಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

‘‘ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ’’ ಎಂದು ಬೋಟ್ ಮಾಲಕರು ಮಾಹಿತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ