Gl jewellers
ರಾಜ್ಯ ವಾರ್ತೆಸ್ಥಳೀಯ

ಸಿಎಂ ವಿರುದ್ಧ ಸ್ನೇಹಮಯಿ ದೂರು! ರಾಜ್ಯಪಾಲರ ಅಂಗಳಕ್ಕೆ ದಾಖಲೆ ಸಹಿತ ಮತ್ತೊಂದು ಕಂಪ್ಲೇಟ್!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಅದೂ ರಾಜ್ಯಪಾಲರಿಗೆ ದಾಖಲೆ ಸಹಿತ ದೂರು.

Pashupathi
Papemajalu garady
Karnapady garady

ದೂರು ನೀಡಿದವರು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ. ವಿಷಯ ಡಿನೋಟಿಫೈ (Land Denotify) ಆರೋಪ.

ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಬಳಿ ಅನುಮತಿ ಕೋರಲಾಗಿದೆ.

ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನನ್ನು ಆಶ್ರಯ ಯೋಜನೆಯಡಿ ನಿವೇಶನ ಇಲ್ಲದವರಿಗೆ ಮತ್ತು ಹಿಂದುಳಿದವರಿಗೆ ನೀಡಲು ಜಿಲ್ಲಾಡಳಿತ 1972ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿತ್ತು. ಬಳಿಕ ಜಮೀನಿನ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ಹಂಚಲಾಗಿತ್ತು. ಆದರೆ, ಸದರಿ ಜಮೀನಿನಲ್ಲಿ ಮೂಲಭೂತ ಸೌಕರ್ಯ ಇಲ್ಲದ ಕಾರಣ ಫಲಾನುಭವಿಗಳು ಮನೆ ನಿರ್ಮಾಣ ಮಾಡಿರಲಿಲ್ಲ. ಈ ಜಮೀನು ಖಾಲಿ ಬಿದ್ದಿತ್ತು.

30 ವರ್ಷಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಈ 1.39 ಎಕರೆ ಜಮೀನನ್ನು ಮಾರಪ್ಪ ಎಂಬ ಹೆಸರಿನ ವ್ಯಕ್ತಿಗೆ ಡಿನೋಟಿಫೈ ಮಾಡುವಂತೆ ಕೋರುತ್ತಾರೆ. ಆದರೆ, ಮಾರಪ್ಪ ಮತ್ತು ಈ ಜಮೀನಿಗೆ ಯಾವುದೇ ಸಂಬಂಧವಿರುದಿಲ್ಲ. ಮಾರಪ್ಪನ ತಂದೆ ಹೆಸರಿನಲ್ಲಿ ಬೇರೊಂದು ಜಾಗದಲ್ಲಿ ಜಮೀನು ಇದೆ.

ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೂಲ ಜಮೀನಿನ ಮಾಲೀಕರು ಮಾರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಈ ವಿಚಾರ ತಿಳಿದ ಫಲಾನುಭವಿಗಳು 2011ರಲ್ಲಿ ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ನಮ್ಮ ಜಮೀನು ನಮಗೆ ನೀಡುವಂತೆ ಮನವಿ ಮಾಡುತ್ತಾರೆ. ಆರೋಪದ ದಾಖಲೆಗಳನ್ನು ಮುಂದಿಟ್ಟು ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಖಾಸಗಿ ವಾಹನದಲ್ಲಿ ‘ಪೊಲೀಸ್’ ಎಂದು ಬರೆದಿದ್ದರೆ ಕ್ರಮ! ವಿಧಾನಸೌಧದಲ್ಲಿ ಗಮನ ಸೆಳೆದ ಗೃಹ ಸಚಿವರ ರಿಪ್ಲೈ!!

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು…

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…