ದೇಶಸ್ಥಳೀಯ

ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು!

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರನ್ನು ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹಸ್ಥಿತಿ ಸ್ಥಿರವಾಗಿದೆಯೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರನ್ನು ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹಸ್ಥಿತಿ ಸ್ಥಿರವಾಗಿದೆಯೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ 96 ವರ್ಷ ವಯಸ್ಸಿನ ಅಡ್ವಾಣಿ ಅವರನ್ನು ಜುಲೈ 3ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮರು ದಿನವೇ ಅವರನ್ನು ಬಿಡುಗಡೆಗೊಳಿಸಲಾಗಿತ್ತು. ಒಂದು ವಾರ ಮೊದಲು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗಾಗಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ಮರುದಿನ ಬಿಡುಗಡೆಗೊಂಡಿದ್ದಾರೆ.

SRK Ladders

ಮಾರ್ಚ್ 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ಅಡ್ವಾಣಿಯವರಿಗೆ ಪ್ರದಾನ ಮಾಡಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3