ರಾಜ್ಯ ವಾರ್ತೆಸ್ಥಳೀಯ

ಗೋವಾ – ಕಾರವಾರ ಸಂಪರ್ಕಿಸುವ ಕಾಳಿ ನದಿ ಸೇತುವೆ ಮಧ್ಯರಾತ್ರಿ ಏಕಾಏಕಿ ಕುಸಿತ: ಚಾಲಕನ ಸಹಿತ ನದಿಗೆ ಬಿದ್ದ ಲಾರಿ!!

Saraswathi
ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕಾರವಾರ (Karwar) ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ (Bridge) ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರವಾರ (Karwar) ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ (Bridge) ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.

maithri

ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್ಬಿ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ. 41 ವರ್ಷ ಹಳೆಯ ಸೇತುವೆಯನ್ನೇ ಬಳಸಲಾಗಿತ್ತು. ಆದರೆ ಮಧ್ಯ ರಾತ್ರಿ ಏಕಾಏಕಿ ಸೇತುವೆ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್(37) ಸಮೇತ ತಮಿಳುನಾಡು ಮೂಲದ SSM ಟ್ರಾನ್ಸಪೋರ್ಟ ಕಂಪನಿಯ TN-52 AC -6880 ನೊಂದಣಿಯ ಖಾಲಿ ಟ್ರಕ್ ನದಿಗೆ ಬಿದ್ದಿದೆ. ಕಾಳಿ ನದಿಯಲ್ಲಿ ಬಿದ್ದ ಲಾರಿಯ ಮುಂಭಾಗದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ಚಾಲಕ ಬಾಲ ಮುರುಗನ್ ರಕ್ಷಣೆಗೆ ಕೂಗಿದ್ದರು. ಸದ್ಯ ಬೀಟ್ ಪೊಲೀಸರ ಮುಂಜಾಗೃತೆಯಿಂದ ಲಾರಿ ಚಾಲಕನ ಪ್ರಾಣ ಉಳಿದಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಎಸ್ಪಿ ನಾರಾಯಣ ಹಾಗೂ ಪೊಲೀಸರ ತಂಡ ನದಿಗೆ ಇಳಿದು ಚಾಲಕನನ್ನು ರಕ್ಷಿಸಿದ್ದಾರೆ. ಸ್ಥಳೀಯ ಮೀನುಗಾರರು ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಬೋಟ್ ಮೂಲಕ ಲಾರಿ ಚಾಲಕನನ್ನ ರಕ್ಷಿಸಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಕಡೆ ಮಧ್ಯರಾತ್ರಿ ತೆರಳುತಿದ್ದ ತಮಿಳುನಾಡು ಮೂಲದ ಟ್ರಕ್ ಸೇತುವೆ ಮೇಲೆ ತೆರಳುತಿದ್ದಂತೆ ಮೊದಲ ಭಾಗ ಕುಸಿದಿದೆ ನಂತರ ಮೂರು ಕಡೆ ಕುಸಿದಿದೆ. ಸದ್ಯ ಟ್ರಕ್ ಚಾಲಕನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನದಿಗೆ ನಿರ್ಮಿಸಿರುವ ಇನ್ನೊಂದು ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸೇತುವೆ ಕುಸಿತದಲ್ಲಿ ಇನ್ನಷ್ಟು ವಾಹನ ಬಿದ್ದಿರುವ ಶಂಕೆ ಹಿನ್ನೆಲೆ ನದಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇನ್ನು ಯಮನ್ ಇಂಡಿಯಾ ಎಂಬ ಕಂಪನಿಯಿಂದ 41 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿತ್ತು. ಕಾರವಾರ ನಗರ ಠಾಣೆಯಲ್ಲಿ NHAI ಹಾಗೂ IRB ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 158