Gl harusha
ಕರಾವಳಿಸ್ಥಳೀಯ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ!

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

srk ladders
Pashupathi
Muliya

ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತರು. ಅಶೋಕ್ ಆ.4ರಂದು ಮನೆಯಿಂದ ನಾಪತ್ತೆಯಾಗಿದ್ದರು. ಯುವಕನಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು, ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎಂಬಲ್ಲಿ ಯುವಕನ ಮೃತದೇಹ ಬುಧವಾರ ಪತ್ತೆಯಾಗಿದೆ.

ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಝಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಮತ್ತಿತರರು ಪಾಲ್ಗೊಂಡಿದ್ದರು.

ಸುಬ್ರಹ್ಮಣ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ