ದೇಶಸ್ಥಳೀಯ

ಆಸ್ಪತ್ರೆಯಲ್ಲೇ ಕಿರಿಯ ವೈದ್ಯೆಯ ಶವ ಪತ್ತೆ: ಓರ್ವನ ಬಂಧನ!

ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ನಿಗೂಢ ರೀತಿಯಲ್ಲಿ ಕಿರಿಯ ಮಹಿಳಾ ವೈದ್ಯರೊಬ್ಬರ ಅರೆ ನಗ್ನ ಶವ ಪತ್ತೆಯಾಗಿತ್ತು, ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕಲಿಯುತ್ತಿರುವ ಇತರ ವಿದ್ಯಾರ್ಥಿಗಳು ಹಾಗೂ ತರಬೇತಿಯಲ್ಲಿದ್ದ ವೈದ್ಯರು ಸೇರಿ ವೈದ್ಯೆಯ ಹತ್ಯೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ ಆದರೆ ಆಡಳಿತ ಮಂಡಳಿ ಇದು ಆತ್ಮಹತ್ಯೆ ಎಂದು ಹೇಳಿತ್ತು, ಆದರೆ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಅಲಲ್ದೆ ಆಕೆಯ ದೇಹದ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿತ್ತು.

ಕಿರಿಯ ವೈದ್ಯೆ ಹತ್ಯೆ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ಸೇರಿದಂತೆ ಇತರ ಸಿಬಂದಿಗಳು ತಮ್ಮ ಸೇವೆಯನ್ನು ಮೊಟಕುಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಅಲ್ಲದೆ ಆಸ್ಪತ್ರೆಗೆ ಯಾವುದೇ ಭದ್ರತೆ ಇಲ್ಲ ಯಾರು ಯಾವ ಸಮಯದಲ್ಲೂ ಆಸ್ಪತ್ರೆಗೆ ಭೇಟಿ ನೀಡಬಹುದು ಯಾವುದೇ ತಪಾಸಣೆ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3