ಕರಾವಳಿಸ್ಥಳೀಯ

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಮಂತ್ ನಿಧನ!

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.

SRK Ladders

ಅವಿವಾಹಿತರಾಗಿದ್ದ ಅವರ ಅಂತಿಮ ವಿಧಿ ವಿಧಾನಗಳು ಸುರತ್ಕಲ್ ಗೋವಿಂದ ದಾಸ ಕಾಲೇಜು ಬಳಿಯ ಕಡಂಬೋಡಿಯ ಸ್ವಗೃಹದಲ್ಲಿ ನಡೆಯಿತು.

ವಿ.ಪ. ಸದಸ್ಯ ಐವನ್ ಡಿಸೋಜಾ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಕೆಪಿಸಿಸಿ ಸದಸ್ಯ ಸದಾಶಿವ ಶೆಟ್ಟಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಳಾಯಿ, ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಾಜಿ ಶಾಸಕ ಮೊಯ್ದೀನ್ ಬಾವ ಮೊದಲಾದವರು ಮೃತರ ಅಂತಿಮ ದರ್ಶನ ಪಡೆದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3