ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡ ವಿದ್ಯಾರ್ಥಿಗಳು ‘ವಂದೇ ಮಾತರಂ’ ಮತ್ತು ‘ಭಾರತ್ ಮಾತಾ ಕೀ ಜೈ’ ಘೋಷಣೆಗಳನ್ನು ಕೂಗಿದರು. ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಮೇಲೆ ರ‍್ಯಾಲಿ ನಡೆಸಿದರು.
ಜಮ್ಮು ಮತ್ತು ಕಾಶ್ಮೀರದ ರಿಯಾಸಿನ ಜನರು, ವಿದ್ಯಾರ್ಥಿಗಳು, ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಮೇಲೆ 750 ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ತಿರಂಗಾ ರ‍್ಯಾಲಿಯನ್ನು ನಡೆಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಕೈಗಳಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ತಲೆಯ ಮೇಲೆ ಎತ್ತಿಕೊಂಡು “ವಂದೇ ಮಾತರಂ” ಮತ್ತು “ಭಾರತ್ ಮಾತಾ ಕೀ ಜೈ” ಎಂಬ ದೇಶಭಕ್ತಿಯ ಘೋಷಣೆಗಳನ್ನು ಕೂಗಿದರು. ಮೆರವಣಿಗೆಯುದ್ದಕ್ಕೂ ಭದ್ರತೆಗಾಗಿ ಅವರನ್ನು ಪೊಲೀಸ್ ಸಿಬ್ಬಂದಿ ಸುತ್ತುವರೆದಿದ್ದರು.