ಸ್ಥಳೀಯ

ಪುತ್ತೂರು ಬಿಜೆಪಿಗೆ ನೂತನ ಸಾರಥ್ಯ| ಪುತ್ತಿಲ ಪರಿವಾರಕ್ಕೊಲಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನ

ಪುತ್ತೂರು : ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲ (Puttur BJP) ಅಧ್ಯಕ್ಷ ಸ್ಥಾನ ಘೋಷಣೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲ (Puttur BJP) ಅಧ್ಯಕ್ಷ ಸ್ಥಾನ ಘೋಷಣೆಯಾಗಿದೆ.

SRK Ladders

ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ವಿಟ್ಲ ಶಕ್ತಿ ಕೇಂದ್ರ ವ್ಯಾಪ್ತಿಯ ದಯಾನಂದ ಶೆಟ್ಟಿ ಉಜಿರೆಮಾರು ಹಾಗೂ ನಗರ ಮಂಡಲ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್ ಆಯ್ಕೆಯಾಗಿದ್ದಾರೆ.

ಪುತ್ತಿಲ ಪರಿವಾರದೊಂದಿಗೆ ಗುರುತಿಸಿಕೊಂಡಿದ್ದ ಪ್ರಸನ್ನ ಮಾರ್ತರವರನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಿಸಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಆದೇಶಿಸಿದ್ದಾರೆ.

ಪುತ್ತಿಲ ಪರಿವಾರದಲ್ಲಿ ಪ್ರಮುಖ ನಾಯಕರಾಗಿದ್ದ ಉಮೇಶ್ ಗೌಡ ಕೋಡಿಬೈಲು ಹಾಗೂ ಪ್ರಶಾಂತ್ ನೆಕ್ಕಿಲಾಡಿ ಅವರನ್ನು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಯನ್ನಾಗಿಯೂ ಅನಿಲ್‌ ಗೌಡ ತೆಂಕಿಲರವರನ್ನು ನಗರ ಮಂಡಲದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಉದ್ಯಮಿ ನಾಗೇಶ್ ಪ್ರಭು ಅವರನ್ನು ನಗರ ಮಂಡಲದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2