Gl harusha
ಕರಾವಳಿಸ್ಥಳೀಯ

ಡಾ. ದೀಪಕ್ ರೈ ಅವರಿಗೆ ಅಭಿನಂದನಾ ಪ್ರಶಸ್ತಿ ಪತ್ರ, ಸನ್ಮಾನ | ರಾಜ್ಯಮಟ್ಟದಲ್ಲಿ ದ.ಕ. ಜಿಲ್ಲೆ ದ್ವಿತೀಯ ಸ್ಥಾನ ಪಡೆಯಲು ಕಾರಣರಾಗಿದ್ದ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ

ಮಂಗಳೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರಿಗೆ ಮಂಗಳೂರಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಅಭಿನಂದನಾ ಪ್ರಶಸ್ತಿ ಪತ್ರ ನೀಡಿ, ಸನ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರಿಗೆ ಮಂಗಳೂರಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಅಭಿನಂದನಾ ಪ್ರಶಸ್ತಿ ಪತ್ರ ನೀಡಿ, ಸನ್ಮಾನಿಸಲಾಯಿತು.

srk ladders
Pashupathi
Muliya

2023-24ನೇ ಸಾಲಿನ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ (ಪುರುಷ ಸಂತಾನ ಹರಣ ಶಸ್ತ್ರಚಿಕಿತ್ಸೆ) ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆಯಲು ಡಾ. ದೀಪಕ್ ರೈ ಕಾರಣರಾಗಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸನ್ಮಾನಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಆರೋಗ್ಯಾಧಿಕಾರಿ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts