ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಆಡಳಿತ ಮಂಡಳಿಯ ಉಪಾಧ್ಯಕ್ಷ ವಿವೇಕ ಆಚಾರ್ಯ ಮಂಚಕಲ್ಲು ನೆರವೇರಿಸಿದರು.
ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಂಸ್ಥೆಯ ಮುಖ್ಯಶಿಕ್ಷಕಿ ಸಂಗೀತ ರಾವ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.