tamanvi
ಕರಾವಳಿಸ್ಥಳೀಯ

ಕೂಳೂರು ಸೇತುವೆ kulur bridge ಬಿರುಕು: ವಾಹನ ಸಂಚಾರಕ್ಕೆ ನಿರ್ಬಂಧ! ಮಂಗಳೂರು – ಉಡುಪಿ ಪ್ರಯಾಣಿಸುವ ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಆಗಸ್ಟ್‌ 19, 20, 21ರಂದು ಮೂರು ದಿನ ಭಾರಿ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗಿನ ಅವಧಿಯಲ್ಲಿ ಮಾತ್ರ ಈ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗುವುದು.

ಈ ದಿನಗಳಂದು ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10ರ ಅವಧಿಯಲ್ಲಿ ಉಡುಪಿ ಕಡೆಯಿಂದ ಕೇರಳಕ್ಕೆ ಸಂಚರಿಸುವ ಭಾರಿ ವಾಹನಗಳು ಮೂಲ್ಕಿ– ಸುರತ್ಕಲ್‌ – ಎಂಆರ್‌ಪಿಎಲ್‌– ಬಜಪೆ– ಕೆಪಿಟಿ– ನಂತೂರು ಮಾರ್ಗವಾಗಿ ಹಾಗೂ ಉಡುಪಿ ಕಡೆಯಿಂದ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ– ಮೂಲ್ಕಿ– ಮೂಡುಬಿದಿರೆ– ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 182