ಬೆಂಗಳೂರು: ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ (ಆ18) ಹೇಳಿದ್ದಾರೆ.
ಆಗಸ್ಟ್ 4 ರಿಂದ 15 ರವರೆಗೆ ಬೆಂಗಳೂರಿನ ಜಿಗಣಿಯಲ್ಲಿ ಐದು ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ.ಮೊದಲ ಪ್ರಕರಣ ಪತ್ತೆಯಾದ ನಂತರ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಐದು ಝಿಕಾ ಸೋಂಕಿನ ಪ್ರಕರಣಗಳು ಕಂಡುಬಂದಿವೆ. ಅದರಂತೆ ಹತೋಟಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುದ್ದಿಗಾರರಿಗೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಝೀಕಾ ಕೂಡ ಸರಳ ಲಕ್ಷಣಗಳನ್ನು ಹೊಂದಿದ್ದು, ಅದರ ಚಿಕಿತ್ಸೆಯು ಡೆಂಗ್ಯೂಗೆ ಹೋಲುತ್ತದೆ ಎಂದು ಸಚಿವರು ಹೇಳಿದ್ದಾರೆ.