Gl harusha
ಧಾರ್ಮಿಕಸ್ಥಳೀಯ

ಮುಕ್ಕೂರು: 15ನೇ ವರ್ಷದ ಗಣೇಶೋತ್ಸವ, ಮೂರೈದು- ಹದಿನೈದರ ಹುತ್ತರಿ | ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು

ಮುಕ್ಕೂರು: ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 15 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮೂರೈದು- ಹದಿನೈದರ ಹುತ್ತರಿ ಕಾರ್ಯಕ್ರಮ ಸೆ.7 ಮತ್ತು 8ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಕುಂಜಾಡಿ‌ ನಿವಾಸದಲ್ಲಿ ರವಿವಾರ ಬಿಡುಗಡೆಗೊಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

srk ladders
Pashupathi
Muliya

ಕಳೆದ ಹದಿನಾಲ್ಕು ವರ್ಷಗಳಿಂದ ಮುಕ್ಕೂರು ಪರಿಸರದಲ್ಲಿ ಗಣೇಶೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದ್ದು ಈ ವರ್ಷ ಹದಿನೈದರ ಸಂಭ್ರಮದಲ್ಲಿದೆ. ಕಾರ್ಯಕ್ರಮವೂ ಸರ್ವರ ಒಗ್ಗೂಡುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿ ಎಂದು ಮಾಜಿ ಸಂಸದ ನಳಿನ್ ಕುಮಾರ್ ‌ಕಟೀಲು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ. ಸದಸ್ಯ ಸತೀಶ್ ಅಂಗಡಿಮೂಲೆ, ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ ಕುಂಡಡ್ಕ, ಮಾಜಿ ಅಧ್ಯಕ್ಷರಾದ ಜಯಂತ ಕುಂಡಡ್ಕ, ರಮೇಶ್ ಕಾನಾವು, ಸದಸ್ಯ ತೇಜಸ್ವಿತ್ ಅಡ್ಯತಕಂಡ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

Related Posts