ಸ್ಥಳೀಯ

ಮೊಬೈಲ್‌ ಕಸಿದರೆಂದು ನೇಣಿಗೆ ಶರಣಾಗುವುದೇ ಮಗಳು?

tv clinic
ಉಪ್ಪಿನಂಗಡಿ: ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ ಬಾಲಕಿ ನೀಲಮ್‌ ಕುಮಾರ್‌ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆದಿತ್ಯವಾರ ರಾತ್ರಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ ಬಾಲಕಿ ನೀಲಮ್‌ ಕುಮಾರ್‌ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಜಾರ್ಖಂಡ್ ನ‌ ಸರ್ಜು ಬುಯ್ಯಾನ್‌ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಆಗಮಿಸಿದ್ದರು.

core technologies

ರವಿವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್‌ ಕುಮಾರಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು ತಾಯಿ ಆಕ್ಷೇಪಿಸಿ ಮೊಬೈಲ್‌ ಕಿತ್ತುಕೊಂಡಿದ್ದರೆನ್ನಲಾಗಿದೆ. ಕೋಪಿಸಿಕೊಂಡ ಬಾಲಕಿಯು ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾಳೆ ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118