ಸ್ಥಳೀಯ

ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ: ವಿದ್ಯಾರ್ಥಿ ವಿರುದ್ಧ ಪೋಕ್ಸೋ ದಾಖಲು | ಬಾಲಕನನ್ನು ಬಿಡುಗಡೆ ಮಾಡಿರುವ ಪೊಲೀಸರು??

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿದ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿದ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಆ.20 ರಂದು ಬೆಳಿಗ್ಗೆ ಬಾಲಕಿಯು ತಾನು ವ್ಯಾಸಂಗ ಮಾಡುತ್ತಿರುವ ಪುತ್ತೂರಿನ ಕಾಲೇಜಿಗೆ ತೆರಳುತ್ತಿದ್ದಾಗ, ಹಿಂದುಗಡೆಯಿಂದ ಆಕೆಯ ಪರಿಚಯದ ಬಾಲಕನು ಹಿಂಬಾಲಿಸಿಕೊಂಡು ಬಂದು, ಪ್ರೀತಿಸುತ್ತಿರುವ ವಿಚಾರದಲ್ಲಿ ಮಾತನಾಡಿದ್ದು, ಈ ವೇಳೆ ಬಾಲಕಿಯು ನಿರಾಕರಿಸಿದ್ದು, ಕೋಪಗೊಂಡ ಬಾಲಕ ಆತನ ಬಳಿಯಿದ್ದ ಹರಿತವಾದ ಆಯುಧದಿಂದ ಕೈಗೆ ತಿವಿದು ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

SRK Ladders

ಇನ್ನೊಂದೆಡೆ ಬಾಲಕನನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3