ರಾಜ್ಯ ವಾರ್ತೆಸ್ಥಳೀಯ

ನೇಣಿಗೆ ಕೊರಳೊಡ್ಡಿದ ಪತ್ನಿ, ಕೆರೆಗೆ ಹಾರಿ ಪ್ರಾಣಬಿಟ್ಟ ಗಂಡ!

ಗಂಡನ ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪತ್ನಿ ಸಾವು ಕಂಡಿದ್ದರೆ, ಗಂಡ ಕೆರೆಗೆ ಹಾರಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗಂಡನ ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪತ್ನಿ ಸಾವು ಕಂಡಿದ್ದರೆ, ಗಂಡ ಕೆರೆಗೆ ಹಾರಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.

SRK Ladders

21 ವರ್ಷದ ಸ್ವಾತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಮಹಿಳೆ.

ಪತ್ನಿ ನೇಣು ಬಿಗಿದುಕೊಂಡು ಸಾವು ಕಂಡಿದ್ದರೆ, ಮೋಹನ್‌ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಪ್ರಸ್ತುತ ಇಬ್ಬರ ಮರಣೋತ್ತರ ಪರೀಕ್ಷೆಗಳು ನಡೆಯುತ್ತಿದ್ದು, ಸಾವಿಗೆ ಕಾರಣಗಳು ಸಿಗಬಹುದು ಎನ್ನಲಾಗಿದೆ.

ಮಹಿಳೆ ಸಾವಿನ ಬಳಿಕ ಗಂಡ ಮೋಹನ್ ಹಾಗೂ ಆತನ ಪೋಷಕರು ಪರಾರಿಯಾಗಿದ್ದಾರೆ ಎಂದು ಮೊದಲಿಗೆ ಸ್ಥಳೀಯರು ಹೇಳಿದ್ದರು. ಕೊಲೆಗೈದು ಪರಾರಿಯಾಗಿದ್ದಾರೆ ಎಂದು ಮೃತ ಸ್ವಾತಿ ಪೋಷಕರು ಆರೋಪ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಕಿಕ್ಕೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಾಪತ್ತೆಯಾಗಿರುವ ಗಂಡ ಹಾಗೂ ಅವನ ಮನೆಯವರಿಗಾಗಿ ಶೋಧ ಕಾರ್ಯ ನಡೆಸಿದ್ದರು.

ಘಟನೆಯ ಬಳಿಕ ಆಕೆಯ ಗಂಡ ಮೋಹನ್‌ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಸ್ವಾತಿಯ ಗಂಡ ಮೋಹನ್‌ ಕೂಡ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನುವ ಸೂಚನೆ ಸಿಕ್ಕಿದೆ. ಕೆರೆಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗದ್ದೆ ಹೊಸೂರು ಸಮೀಪದ ಕೆರೆಯಲ್ಲಿಯೆ ಶವ ಪತ್ತೆಯಾಗಿದ್ದು. ಆ ಶವ ಮೃತಳ ಗಂಡನದ್ದೆ ಎಂಬ ಅನುಮಾನ ವ್ಯಕ್ತವಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4