ಸ್ಥಳೀಯ

ಆ. 24ಕ್ಕೆ ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ – ಸಹಾಯಧನ ವಿತರಣಾ ಸಮಾರಂಭ

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವರ್ಷಂಪ್ರತಿಯಂತೆ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಆ. 24ರಂದು ಬೆಳಿಗ್ಗೆ ಗಂಟೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ನಡೆಯಲಿದೆ ಎಂದು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ
ಶಾಲಾ ವಿದ್ಯಾರ್ಥಿಗಳಿಗೆ ವರ್ಷಂಪ್ರತಿಯಂತೆ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಆ. 24ರಂದು ಬೆಳಿಗ್ಗೆ ಗಂಟೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ನಡೆಯಲಿದೆ ಎಂದು
ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಸಂಘದ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಆಯ್ದ ಸರಕಾರಿ ಶಾಲೆಗಳಲ್ಲಿ 8ನೇ ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ಶಾಲಾ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ 250 ವಿದ್ಯಾರ್ಥಿಗಳಿಗೆ ತಲಾ ರೂ. 2 ಸಾವಿರ ನೀಡಲಾಗುವುದು. ಇದುವರೆಗೆ ಒಟ್ಟು ರೂ. 21,73,000 ಮೊತ್ತವನ್ನು ಒಟ್ಟು 1,067 ವಿದ್ಯಾರ್ಥಿಗಳಿಗೆ ವಿತರಿಸಿರುತೇವೆ. ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಕೂಡಾ ನೀಡಿರುತ್ತೇವೆ. ಆ. 24ರಂದು ನಡೆಯುವ ಸಂಘದ ಮಹಾಸಭೆಯ ಬಳಿಕ ಈ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಯಸ್ ಯಂ ರಘು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

SRK Ladders

ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 22 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 14 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ ಸಂಘವು 728 ಕೋಟಿ ರೂ. ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ.1.65 ಕೋಟಿ ರೂ. ಗಳಷ್ಟು ಲಾಭವನ್ನು ಗಳಿಸಿದ್ದು, ಸದಸ್ಯರಿಗೆ ಶೇ.16 ಡಿವಿಡೆಂಡ್ ನೀಡಲಾಗುವುದು ಎಂದು ಘೋಷಣೆ ಮಾಡಲಾಗುವುದು ಎಂದು ಹೇಳಿದ ಅಧ್ಯಕ್ಷ ಸೀತಾರಾಮ ರೈ ಅವರು, ಸಂಘದ 2023-24ನೇ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 8524 ಸದಸ್ಯರಿದ್ದು ಒಟ್ಟು 3.22 ಕೋಟಿ ರೂ. ಗಳಷ್ಟು ಪಾಲು ಬಂಡವಾಳವನ್ನು ಹೊಂದಿರುತ್ತದೆ. ಸಂಘವು 131.93 ಕೋಟಿ ರೂ. ಠೇವಣಿಯನ್ನು ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 13.36 ರಷ್ಟು ಹೆಚ್ಚಳವಾಗಿದೆ. ರೂ. 109.74 ಕೋಟಿ ರೂ.ಗಳಷ್ಟು ಹೊರಬಾಕಿ ಸಾಲ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.20.67 ರಷ್ಟು ಹೆಚ್ಚಳವಾಗಿದೆ. ಸಂಘವು 2.30 ಕೋಟಿ ರೂ.ಗಳಷ್ಟು ಕ್ಷೇಮ ನಿಧಿ ಮತ್ತು 1.97 ಕೋಟಿ ರೂ. ಗಳಷ್ಟು ಇತರ ನಿಧಿಗಳನ್ನು ಹೊಂದಿ, ರೂ. 138.89 ಕೋಟಿಗಳಷ್ಟು ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿರುವ ಮತ್ತು ಆಡಿಟ್ ವರ್ಗದಲ್ಲಿ ಸತತವಾಗಿ ‘ಎ’ ತರಗತಿಯನ್ನು ಕಾಯ್ದುಕೊಂಡು ಬಂದಿರುವ ಏಕೈಕ ಸಂಘವಾಗಿರುತ್ತದೆ. ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡವನ್ನು ಹೊಂದುವ ಉದ್ದೇಶದಿಂದ ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ 0.75 ಸೆಂಟ್ಸ್ ನಿವೇಶನವನ್ನು ಸಂಘದ ಹೆಸರಿನಲ್ಲಿ ಖರೀದಿಸಿದ್ದು, ಸದ್ರಿ ನಿವೇಶನದಲ್ಲಿ ನೂತನ ಕೇಂದ್ರ ಕಚೇರಿಯ ಕಾಮಗಾರಿ ಪ್ರಗತಿಯಲ್ಲಿದೆ. ಸಂಘಕ್ಕೆ 25 ವರ್ಷ ಪೂರೈಸುವುದರೊಳಗೆ ಕಟ್ಟಡ ನಿರ್ಮಾಣದ ಕೆಲಸ ಪೂರ್ತಿಗೊಳಿಸಿ ಲೋಕಾರ್ಪಣೆ ಮಾಡಲಾಗುವುದು. ಅಲ್ಲದೆ 2024-25 ನೇ ಸಾಲಿನಲ್ಲಿ ಮಂಗಳೂರಿನಲ್ಲಿ ಹೊಸ ಶಾಖೆಯನ್ನು ತೆರೆಯುವ ಯೋಜನೆಯನ್ನು ರೂಪಿಸಲಾಗಿದೆ. ಸಂಘದ ಪ್ರಗತಿಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 5ನೇ ಬಾರಿ ಪ್ರಶಸ್ತಿಗೆ ಭಾಜನವಾಗಿದೆ. ಮತ್ತು 2023-24 ನೇ ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ 64 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಸಂಘಕ್ಕೆ ‘ಉತ್ತಮ ಸಹಕಾರಿ ಸಂಘ’ ಎಂದು ಪ್ರಶಸ್ತಿ ಗಳಿಸಿರುತ್ತದೆ. 70 ನೇ ಸಪ್ತಾಹದಲ್ಲಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದು ಕೊಂಡು ಸಹಕಾರಿ ಕ್ಷೇತ್ರದಲ್ಲಿ ತನ್ನ ಗರಿಮೆಯನ್ನು ಹೆಚ್ಚಿಸಿಕೊಂಡಿದೆ. ಸಂಘದಲ್ಲಿ ಗ್ರಾಹಕರಿಗೆ ತ್ವರಿತ ಮತ್ತು ಪಾರದರ್ಶಕ ಸೇವೆಯನ್ನು ನೀಡುವ ಸಲುವಾಗಿ ನೆಫ್ಟ್ ಆರ್‌ಟಿಜಿಎಸ್ ಸೌಲಭ್ಯ, ಎಸ್‌ಎಂಎಸ್ ಸೌಲಭ್ಯಗಳನ್ನು ಒದಗಿಸಲಾಗಿದೆ ಹಾಗು ಸದಸ್ಯರಿಗೆ ಸೋಲಾ‌ರ್ ವಾಟರ್ ಹೀಟರ್ ಮತ್ತು ಸೋಲಾರ್ ಲೈಟ್ ಅಳವಡಿಸಲು ಶೂನ್ಯ ಬಡ್ಡಿದರದಲ್ಲಿ ರೂ. 2,00,000 ದ ತನಕ ಸಾಲವನ್ನು ವಿತರಿಸುತ್ತೇವೆ ಎಂದು ಮಾಹಿತಿ ನೀಡಿದರು.

ಸರಕಾರಿ ಶಾಲೆ ಮಕ್ಕಳು ಪ್ರಾಥಮಿಕ ಹಂತದಲ್ಲೇ ಶಿಕ್ಷಣದಿಂದ ಹೊರ ಹೋಗುವುದು ನಮಗೆ ಗೊತ್ತಿದೆ. ಈ ನಿಟ್ಟಿನಲ್ಲಿ ಅವರ ಏಳೆಗಾಗಿ ಈ ವಿದ್ಯಾನಿಧಿಯೋಜನೆ ಮಾಡಿದ್ದೇವೆ. ಮೊದಲನೆಯದಾಗಿ ನನ್ನ ತಂದೆಯವರು ಎಲಿಮೆಂಟರಿ ಸ್ಕೂಲ್ ಟೀಚರ್, ನಾನು ಎಸ್.ಎಸ್.ಎಲ್.ಸಿಯ ತನಕ ಕಲಿತದ್ದು ಸರಕಾರಿ ಶಾಲೆಯಲ್ಲೇ. ಇವೆರಡನ್ನು ಸಂಯೋಜನೆ ಮಾಡಿ ಈ ವಿದ್ಯಾನಿಧಿ ಯೋಜನೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಸುಂದರ್ ರೈ, ನಿರ್ದೇಶಕರಾದ ಅರಿಯಡ್ಕ ಚಿಕ್ಕಪ್ಪ ನಾಕ್, ಅಶ್ವಿನ್ ಎಲ್.ಶೆಟ್ಟಿ, ಮಹಾಪ್ರಬಂಧಕ ವಸಂತ ಜಾಲಾಡಿ ಮತ್ತು ಎಜಿಎಮ್ ಸುನಾದ್‌ರಾಜ್ ಶೆಟ್ಟಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2