Gl harusha
ದೇಶಸ್ಥಳೀಯ

7 ತಿಂಗಳ ಮಗುವಿನ ಹೊಟ್ಟೆಯೊಳಗೆ ಭ್ರೂಣ!!

ಒಂದೆಡೆ ಭ್ರೂಣ ಹತ್ಯೆ ಪ್ರಕರಣ ದಾಖಲಾಗುತ್ತಿದ್ದರೆ, ಮತ್ತೊಂದೆಡೆ ಮಗುವಿನ‌ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿದೆ. ಈ ಅಚ್ಚರಿಯ ಘಟನೆ ನಡೆದಿರುವುದು ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ.

ಈ ಸುದ್ದಿಯನ್ನು ಶೇರ್ ಮಾಡಿ

ಒಂದೆಡೆ ಭ್ರೂಣ ಹತ್ಯೆ ಪ್ರಕರಣ ದಾಖಲಾಗುತ್ತಿದ್ದರೆ, ಮತ್ತೊಂದೆಡೆ ಮಗುವಿನ‌ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿದೆ.

srk ladders
Pashupathi
Muliya

ಈ ಅಚ್ಚರಿಯ ಘಟನೆ ನಡೆದಿರುವುದು ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ.

ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಬೆಳೆಯುತ್ತಿರುವುದು ಪತ್ತೆಯಾಗಿದ್ದು, ತಕ್ಷಣವೇ ಮಗುವಿಗೆ ಆಪರೇಷನ್ ಮಾಡಿ ಮಗುವಿನ ಹೊಟ್ಟೆಯಿಂದ ಭ್ರೂಣವನ್ನು ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದರು.

ಮಗು ಆಗಾಗ ಹೊಟ್ಟೆನೋವಿನಿಂದ ಅಳುತ್ತಿತ್ತು. ಇದನ್ನು ಗಮನಿಸಿದ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಹೊಟ್ಟೆಯ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ವರದಿ ನೋಡಿದಾಗ, ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಬೆಳೆಯುತ್ತಿರುವುದು ಪತ್ತೆಯಾಗಿದೆ. ಇದನ್ನೆಲ್ಲ ಮಗುವಿನ ಕುಟುಂಬಸ್ಥರಿಗೆ ಹೇಳಿದಾಗ ಬೆಚ್ಚಿಬಿದ್ದಿದ್ದಾರೆ. ಪ್ರಾರಂಭದಲ್ಲಿ ಮಗುವಿನ ಹೊಟ್ಟೆಯಲ್ಲಿ ಗೆಡ್ಡೆ ಇದೆ ಎಂದು ಎಲ್ಲರೂ ಭಾವಿಸಿದ್ದರು.

ಪರೀಕ್ಷಾ ವರದಿಗಳನ್ನು ಪರಿಶೀಲಿಸಿದ ವೈದ್ಯರು ತಕ್ಷಣ ಆಪರೇಷನ್ ಮಾಡಲು ನಿರ್ಧರಿಸಿದ್ದಾರೆ. ಪೋಷಕರ ಒಪ್ಪಿಗೆ ಮೇರೆಗೆ ಮಗುವಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದೆ. ಕೆಲವು ಸಂದರ್ಭಗಳಲ್ಲಿ ತಾಯಿಯ ಗರ್ಭದಲ್ಲಿ ಬೆಳೆಯುತ್ತಿರುವ ಭ್ರೂಣದೊಳಗೆ ಮತ್ತೊಂದು ಭ್ರೂಣವು ರೂಪುಗೊಳ್ಳುತ್ತದೆ ಎಂದು ಹೇಳಲಾಗುತ್ತದೆ. ದೇಶದಲ್ಲಿ ಈವರೆಗೆ ಇಂತಹ 200ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ವೈದ್ಯರು ಹೇಳಿದ್ದಾರೆ.

ಇಂತಹ ಪ್ರಕರಣ ಇದೇ ಮೊದಲೇನಲ್ಲಾ ಈ ಹಿಂದೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿತ್ತು. ಇದೊಂದು ಅಪರೂಪದ ಪ್ರಕರಣ ಎಂದು ತಜ್ಞರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts