ಕರಾವಳಿಸ್ಥಳೀಯ

ಟಿಂಬರ್ ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ !!

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿ.ಸಿ. ರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.22ರ ಗುರುವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿ.ಸಿ. ರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.22ರ ಗುರುವಾರ ನಡೆದಿದೆ.

akshaya college

‌ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ (64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಬಿ.ಸಿ. ರೋಡಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಭಕ್ತ ಕುಮಾರ್ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗಿದೆ. ಅವಿವಾಹಿತರಾಗಿರುವ ಇವರು ಅಪಾರ್ಟ್ ಮೆಂಟ್ ನಲ್ಲಿ ಒಬ್ಬರೇ ವಾಸವಾಗಿದ್ದರು.

ಮರದ ವ್ಯಾಪಾರ ಮಾಡುತ್ತಿದ್ದ ಇವರು ಇತ್ತೀಚಿಗೆ ಆರೋಗ್ಯ ಸಮಸ್ಯೆಯಿಂದ ಸ್ವಲ್ಪಮಟ್ಟಿಗೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದ್ದು, ಇದರಿಂದಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 132