Gl harusha
ಕರಾವಳಿಸ್ಥಳೀಯ

ಹೀಗೇ ಆಚರಿಸಿ ಗಣೇಶ ಚೌತಿ | ಧ್ವನಿವರ್ಧಕ, ವಿಗ್ರಹ ಪ್ರತಿಷ್ಠೆ ಬಗ್ಗೆಯೂ ಜಿಲ್ಲಾಡಳಿತ ನೀಡಿದೆ ಆದೇಶ!

ಪುತ್ತೂರು : ಈ ವರ್ಷದ ಗೌರಿ ಗಣೇಶ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ದ.ಕ. ಜಿಲ್ಲಾಡಳಿತ ಸೂಚಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಈ ವರ್ಷದ ಗೌರಿ ಗಣೇಶ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ದ.ಕ. ಜಿಲ್ಲಾಡಳಿತ ಸೂಚಿಸಿದೆ.

srk ladders
Pashupathi
Muliya

ವಿಗ್ರಹ ವಿಸರ್ಜನೆ ಕಾರಣದಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲಮೂಲ ಸಂರಕ್ಷಿಸುವ ನಿಟ್ಟಿನಲ್ಲಿ ಫ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ರಾಸಾಯನಿಕ ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಕೆರೆ, ಬಾವಿ ಮುಂತಾದ ಜಲಮೂಲಗಳಲ್ಲಿ ವಿಸರ್ಜಿಸಿರುವುದನ್ನು ನಿಷೇಧಿಸಲಾಗಿದೆ.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅನುಸಾರ ಕ್ರಮ ಕೈಗೊಳ್ಳಲಾಗುವುದು.

ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಗುರುತಿಸಿರುವ ಸ್ಥಳಗಳಲ್ಲೇ ವಿಸರ್ಜಿಸಬೇಕು. ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುವ ಗಣೇಶ ವಿಗ್ರಹಗಳನ್ನು ಪ್ರತಿಯೊಂದು ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್‌ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿ ಪಡೆದ ಬಳಿಕವೇ ಸ್ಥಾಪಿಸಬೇಕು. ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರ ಕಛೇರಿ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts