Gl harusha
ಸ್ಥಳೀಯ

ಸರ್ವೆ: ಕಿಟಕಿ ಮುರಿದು ನಗ-ನಗದು ಕಳವು!

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

srk ladders
Pashupathi
Muliya

ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿ ಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ ಕಪಾಟಿನಿಂದ 3 ಪವನ್ ಚಿನ್ನ, 35 ಸಾವಿರ ರೂ. ನಗದು ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆದಿರುವುದರಿಂದ ಮನೆ ಬಗ್ಗೆ ಮಾಹಿತಿ ಇರುವವರೇ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ