tamanvi
ಕರಾವಳಿಸ್ಥಳೀಯ

ಬೈಕ್ ಅಪಘಾತ, ಸಹಕಾರಿ ರಂಗದ ಉದ್ಯೋಗಿ ಮೃತ್ಯು!

D_shiva_bhat
ಎರಡು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸಹಕಾರಿ ಸಂಸ್ಥೆಯ ಉದ್ಯೋಗಿ ಐವರ್ನಾಡು ಗ್ರಾಮದ ಪಾಲೆಪ್ಪಾಡಿ, ನಿವಾಸಿ

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಎರಡು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸಹಕಾರಿ ಸಂಸ್ಥೆಯ ಉದ್ಯೋಗಿ ಐವರ್ನಾಡು ಗ್ರಾಮದ ಪಾಲೆಪ್ಪಾಡಿ, ನಿವಾಸಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಲೆಕ್ಕಿಗ ಬೋಜಪ್ಪ (56) ಮೃತ ದುರ್ದೈವಿ.

maithri

ಸುಳ್ಯದಿಂದ ಎಲಿಮಲೆ ಕಡೆಗೆ ಹೋಗುತ್ತಿದ್ದ ಬುಲೆಟ್ ಹಾಗೂ ಐವರ್ನಾಡು ಸುಳ್ಯಕ್ಕೆ ಬರುತ್ತಿದ್ದ ಬೋಜಪ್ಪರ ಬೈಕ್‌ ಆರ್ತಾಜೆ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೋಜಪ್ಪ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬುಲೆಟ್ ಬೈಕ್‌ ಸವಾರ ನೆಲ್ಲೂರು ಕೆಮ್ರಾಜೆ ಗ್ರಾಮದ ಮಂದ್ರಪ್ಪಾಡಿಯ ವಸಂತ ಮತ್ತು ಅರುಣ್ ಅವರಿಗೂ ಕೂಡ ಗಾಯಗಳಾಗಿದ್ದು, ಅವರು ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಎರಡೂ ಬೈಕ್‌ ಗಳು ಜಖಂಗೊಂಡಿವೆ.

ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು, ಒಬ್ಬರು ಸಹೋದರಿಯನ್ನು ಅಗಲಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174