Gl harusha
ರಾಜ್ಯ ವಾರ್ತೆಸ್ಥಳೀಯ

ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕನ ಸಾವು!

ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಸುರಿದ ಪರಿಣಾಮ ಕಾಲುವೆಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿತ್ತು. ಈ ವೇಳೆ ಆಟವಾಡುತ್ತಿದ್ದ ಬಾಲಕ ಕಾಲುವೆಯಲ್ಲಿ ಜಾರಿ ಬಿದ್ದಿದ್ದ. ಹಾವೇರಿ ಎಸ್‌.ಪಿ ಕಚೇರಿ ಮುಂಭಾಗದಲ್ಲಿ ಈ ಘಟನೆ

ಈ ಸುದ್ದಿಯನ್ನು ಶೇರ್ ಮಾಡಿ

ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಬಾಲಕ ಕೊಚ್ಚಿ ಹೋದ ಘಟನೆ ನಡೆದಿಸೆ.

srk ladders
Pashupathi
Muliya

ಹಾವೇರಿ ಎಸ್‌.ಪಿ ಕಚೇರಿ ಮುಂಭಾಗದಲ್ಲಿ ಈ ಘಟನೆ ನಡೆದಿದೆ. 12 ವರ್ಷದ ನೀವೆದನ್‌ ಬಸವರಾಜ್ ಗುಡಗೇರಿ ಕೊಚ್ಚಿ ಹೋದ ಬಾಲಕ ಎಂದು ಗುರುತಿಸಲಾಗಿದೆ.

ಭಾರೀ ಮಳೆ ಪರಿಣಾಮ ಕಾಲುವೆಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿತ್ತು. ಈ ವೇಳೆ ಆಟವಾಡುತ್ತಿದ್ದ ಬಾಲಕ ಕಾಲುವೆಯಲ್ಲಿ ಜಾರಿ ಬಿದ್ದಿದ್ದ.

ಈತನ ರಕ್ಷಣಗೆ ಸತತ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಲಾಯಿತು. ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಬಾಲಕ ಪತ್ತೆಯಾಗಿದ್ದ.

ಅಗ್ನಿಶಾಮಕ ಇಲಾಖೆ, ನಗರಸಭೆ ಸಿಬ್ಬಂದಿ ಪೊಲೀಸ್‌ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ವೈದ್ಯರು ಹೇಳುವಂತೆ ಆಸ್ಪತ್ರೆಗೆ ಬರುವ ಮುಂಚೆಯೆ ಬಾಲಕ ಮೃತಪಟ್ಟಿದ್ದ ಎಂದು ಹಾವೇರಿಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾಹಿತಿ ನೀಡಿದ್ದಾರೆ.  ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗುತ್ತಿರುವುದುಲ್ಲದೆ ಅಲ್ಲಲ್ಲಿ ಕೆಲ ಅವಘಡಗಳು ಸಂಭವಿಸುತ್ತಿವೆ ಮುನ್ನೆಚ್ಚರಿಕೆ ವಹಿಸಬೇಕಾಗಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾಹಿತಿ ನೀಡಿದ್ದಾರೆ. 


ಈ ಸುದ್ದಿಯನ್ನು ಶೇರ್ ಮಾಡಿ

Related Posts