Gl harusha
ಕರಾವಳಿಸ್ಥಳೀಯ

ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಹತ್ಯೆಗೈದ ತಂದೆ!

ಮದ್ಯ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದಿರುವ ಘಟನೆ  ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ವರದಿಯಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಮದ್ಯ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದಿರುವ ಘಟನೆ  ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ವರದಿಯಾಗಿದೆ. ರಾಜೇಶ್(36) ಕೊಲೆಯಾದವರು ಎಂದು ಗುರುತಿಸಲಾಗಿದ್ದು, ಲಿಂಗಪ್ಪ ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ.

srk ladders
Pashupathi
Muliya

ಕ್ಯಾಬ್ ಚಾಲಕನಾಗಿದ್ದ ರಾಜೇಶ್, ದಿನವೂ ಮದ್ಯ ಕುಡಿದು ಬಂದು ಪೋಷಕರೊಂದಿಗೆ ಜಗಳವಾಡುತ್ತಿದ್ದ. ಮಗನ ಕಿರುಕುಳ ತಾಳಲಾರದೇ ಲಿಂಗಪ್ಪ ಹಾಗೂ ಆತನ ಪತ್ನಿ ಪ್ರತ್ಯೇಕವಾಗಿ ವಾಸವಾಗಿದ್ದರು. ಆದರೂ, ಸಹ ಕುಡಿದು ಬಂದು ಗಲಾಟೆ ಮಾಡುವುದನ್ನು ರಾಜೇಶ್ ನಿಲ್ಲಿಸಿರಲಿಲ್ಲ. ಅ.18ರ ರಾತ್ರಿಯೂ ಪಾನಮತ್ತನಾಗಿ ಬಂದಿದ್ದ ರಾಜೇಶ್, ಮನೆಯ ಗೇಟ್‌ನ್ನು ಒದ್ದು ತಂದೆಯ ಮೇಲೆ ಹಲ್ಲೆ ಮಾಡಲಾರಂಭಿಸಿದ್ದ ಎನ್ನಲಾಗಿದೆ.

ಇದರಿಂದ ಬೇಸತ್ತ ಲಿಂಗಪ್ಪ ಮಗ ರಾಜೇಶ್‌ನ ಕೈಕಾಲು ಕಟ್ಟಿ ಮರದ ದೊಣ್ಣೆಯಿಂದ ಹೊಡೆದಿದ್ದಾರೆ. ಇದರಿಂದಾಗಿ ರಾಜೇಶ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ