Gl harusha
ಕರಾವಳಿಸ್ಥಳೀಯ

ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಯ ಬಂಧನ…!!

ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಿನ್ನಿಗೋಳಿಯ ದಾಮಸ್‌ಕಟ್ಟೆ ಬಳಿ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

srk ladders
Pashupathi
Muliya

ಪಟ್ಟೆ ಕ್ರಾಸ್ ಸಮೀಪದ ಉಳೆಪಾಡಿ ನಿವಾಸಿ ಬಾಬು ಮುಖಾರಿ ಆರೋಪಿ. ವಿದ್ಯಾರ್ಥಿನಿ  ಬಸ್ಸಿನಿಂದ ಇಳಿದು ಸುಂಕದಕಟ್ಟೆ (ಪಟ್ಟೆ) ರಸ್ತೆಯಲ್ಲಿ ಹೋಗುತ್ತಿರುವಾಗ ಆರೋಪಿ ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಲು ಯತ್ನಿಸಿದ್ದ ಎನ್ನಲಾಗಿದೆ.

ಆರೋಪಿಯನ್ನು ತಳ್ಳಿ ಹಾಕಿ ವಿದ್ಯಾರ್ಥಿನಿ ಓಡಿ ಹೋಗಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರ ಸಹಕಾರದಿಂದ ಮೂಲ್ಕಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts