ರಾಜ್ಯ ವಾರ್ತೆಸ್ಥಳೀಯ

ಡಾನಾ ಚಂಡಮಾರುತ! ಕರಾವಳಿ ಪ್ರದೇಶಕ್ಕೆ ಎಚ್ಚರಿಕೆ!!!

ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬಾರದಿರಲು ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬಾರದಿರಲು ಸೂಚನೆ ನೀಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ.

SRK Ladders

ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋ‌ರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಭಾರತೀಯ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತನ್ನ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ನಿಯೋಜಿಸಿದೆ.

ಸಮುದ್ರದಲ್ಲಿ ತುರ್ತು ಪರಿಸ್ಥಿತಿಯಲ್ಲಿ ವಿಮಾನಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4