Gl
ಕರಾವಳಿಸ್ಥಳೀಯ

ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ;  ಆರೋಪಿ ಪೊಲೀಸ್‌ ವಶ.!!

ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೋಲಿಸ್   ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೋಲಿಸ್   ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಎಂದು ಗುರುತಿಸಲಾಗಿದೆ.

Pashupathi

ಆರೋಪಿಯಿಂದ ಸುಮಾರು 1,87,500 ಮೌಲ್ಯದ 2 ಕೆಜಿ 344 ಗ್ರಾಂ ತೂಕದ ಗಾಂಜಾ, ಒಂದು ಲಕ್ಷ ಮೌಲ್ಯದ APRILIA ಕಂಪೆನಿಯ ಸ್ಕೂಟರ್, 5.810 ನಗದು, 10 ಸಾವಿರ ಮೌಲ್ಯದ ಮೊಬೈಲ್, ಒಂದು ಚೂರಿ ಸಹಿತ ಒಟ್ಟು 3,04,610 ಲಕ್ಷ ಮೌಲ್ಯದ ಸೊತ್ತುಗಳನ್ನು ಸೆನ್ ಅಪರಾಧ ಪೊಲೀಸ್‌ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

akshaya college

ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್‌ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾ‌ರ್, ಪ್ರವೀಣ್, ವೆಂಕಟೇಶ್, ರಾಜೇಶ್, ಯತೀನ್ ಕುಮಾರ್, ಪ್ರಶಾಂತ್ ಮತ್ತು ಚರಣ್‌ರಾಜ್ ರವರನ್ನೊಳಗೊಂಡ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 114