ರಾಜ್ಯ ವಾರ್ತೆಸ್ಥಳೀಯ

ಪಟಾಕಿ ಅವಘಡ; 150 ಮಂದಿಗೆ ಗಾಯ, 8 ಮಂದಿ ಗಂಭೀರ!!

ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು : ನೀಲೇಶ್ವರಂನ  ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂಬುದಾಗಿ ವರದಿಯಾಗಿದೆ. ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದೆ ಎಂಬುದು ತಿಳಿದುಬಂದಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆ ಹಾಗೂ ನೀಲೇಶ್ವರ ಮತ್ತು ಕಾಞಂಗಾಡ್‌ನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

SRK Ladders

ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ದೇವಾಲಯದ ಗೋಡೆಗೆ ಹೊಂದಿಕೊಂಡಂತೆ ನಿರ್ಮಿಸಲಾದ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4