tamanvi
ಕರಾವಳಿರಾಜ್ಯ ವಾರ್ತೆಸ್ಥಳೀಯ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳ: ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ವಾಮನಪುರಂ ಪಾರ್ಕ್‌ ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರೋಡ್ ಕ್ರಾಸ್ ಮಾಡಿದ್ದಾರೆ. ಈ ವೇಳೆ ಸಿಎಂ ಅವರ ಬೆಂಗಾವಲು ಪಡೆಯ ಪೈಲಟ್ ವಾಹನವು ಹಠಾತ್ ಬ್ರೇಕ್ ಹಾಕಿದೆ.

ಈ ವೇಳೆ ಒಂದೇ ವೇಗದಲ್ಲಿದ್ದ ಒಟ್ಟು ಏಳು ವಾಹನಗಳು ಒಂದಕ್ಕೊಂದರಂತೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಸಿಎಂ ಕಾರು ಸೇರಿದಂತೆ ಅವರ ಬೆಂಗಾವಲು ವಾಹನಗಳಿಗೆ ಚಿಕ್ಕಪುಟ್ಟ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 219