ರಾಜ್ಯ ವಾರ್ತೆಸ್ಥಳೀಯ

ದ.ಕ. ಜಿಲ್ಲೆಗೆ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿ!!  ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ನರೇಂದ್ರ ಮೋದಿ!

ಕೇಂದ್ರ ಸರ್ಕಾರದ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  ಇಂದು ಮಂಗಳವಾರ ನೆರವೇರಿಸಲಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕೇಂದ್ರ ಸರ್ಕಾರದ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  ಇಂದು ಮಂಗಳವಾರ ನೆರವೇರಿಸಲಿದ್ದಾರೆ.

akshaya college

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಟರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆಸ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಇಂದು 11.30ಕ್ಕೆ ಆಯೋಜಿಸಲಾಗಿದೆ. ಮಧ್ಯಾಹ್ನ 01:10ಕ್ಕೆ ವೀಡಿಯೋ ಕಾನ್ಸರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಈ ಬಹುಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಮಂಗಳೂರಿನಲ್ಲಿ ನಡೆಯುವ ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ವೈ ಶೆಟ್ಟಿ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್‌ ಸದಸ್ಯರು. ಅಧಿಕಾರಿಗಳು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಸದರ ಕಾರ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗರಿಂದಲೇ ಬಿಜೆಪಿ ಮುಕ್ತ | ಪತ್ರಿಕಾಗೋಷ್ಠಿಯಲ್ಲಿ ನೂರುದ್ದೀನ್ ಸಾಲ್ಮರ

ಪುತ್ತೂರು: ಹೊಸದಾಗಿ ಮೇಲ್ದರ್ಜೆಗೇರಿದ ಕಡಬ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಯ ಗೆಲುವಿನಿಂದ ಆ…

1 of 132