ಸ್ಥಳೀಯ

ಗ್ರಾಪಂ ಉಪಚುನಾವಣೆ:ಕೆದಂಬಾಡಿ, ಅರಿಯಡ್ಕಕ್ಕೆ ಅಭ್ಯರ್ಥಿಗಳ ಆಯ್ಕೆ

ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋ ಅರಿಯಡ್ಕ ಗ್ರಾಪಂ ಗೆ ವಿನಾಯಕ ಅವರನ್ನು ಆಯ್ಕೆ ಮಾಡಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋ ಅರಿಯಡ್ಕ ಗ್ರಾಪಂ ಗೆ ವಿನಾಯಕ ಅವರನ್ನು ಆಯ್ಕೆ ಮಾಡಲಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರವರು ಈ ಆಯ್ಕೆಯನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು,ಅರಿಯಡ್ಕ ಗ್ರಾಪಂ ಸದಸ್ಯೆ ಜಯಂತಿ ಪಟ್ಟುಮೂಲೆ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್,ಜೋಕಿಂ ಡಿಸೋಜಾ, ಪ್ರಸಾದ್ ಕೌಶಲ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

akshaya college


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107