Gl harusha
ಕರಾವಳಿರಾಜ್ಯ ವಾರ್ತೆಸ್ಥಳೀಯ

ಧರ್ಮಸ್ಥಳ ಯಾತ್ರೆ: ನಾಲ್ವರು ಮೃತ್ಯು!!

ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

srk ladders
Pashupathi
Muliya

ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಓಮಿನಿ ಮತ್ತು ಆಲೋ ಕಾರುಗಳು, ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಮೆಸ್ಕಾಂ ಇಲಾಖೆಯ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರೇಮಾ(58), ಹಂಪಯ್ಯ(65), ಮಂಜಯ್ಯ(60) ಪ್ರಭಾಕರ್(45) ಮೃತಪಟ್ಟವರು. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

ಅಪಘಾತದಲ್ಲಿ 12 ಮಂದಿಗೆ ಗಾಯಗಳಾಗಿವೆ. ಮೃತರೆಲ್ಲರೂ ಚಿತ್ರದುರ್ಗ ಮತ್ತು ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದ್ದು, ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕೊಟ್ಟಿಗೆಹಾರ ದಾಟಿ ಸ್ವಲ್ಪ ದೂರ ಬಂದಾಗ ವಾಹನವೊಂದನ್ನು ಓವರ್ ಟೇಕ್ ಮಾಡಿ ಸಾಗುವಾಗ ಎದುರಿನಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಓಮಿನಿ ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬರುತ್ತಿದ್ದ ಅದೇ ಕುಟುಂಬದ ಆಲೋ ಕಾರು ಓಮಿನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಓಮಿನಿ ಕಾರು ನಜ್ಜು ಗುಜ್ಜಾಗಿದ್ದು ಓಮಿನಿಯಲ್ಲಿದ್ದ ಮೂವರು ಪುರುಷರು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ఎల్ల ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts